ಇಸ್ಲಾಮಾಬಾದ್: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ತೋರುವ ಮೂಲಕ ಟೂರ್ನಿಯಿಂದ ಹೊರಬಿದ್ದು ಆಘಾತ ಕಂಡಿರುವ ಪಾಕಿಸ್ತಾನ ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಅಮೆರಿಕ ಹಾಗೂ ಐರ್ಲೆಂಡ್ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕ 5ಕ್ಕೆ ಏರಿಕೆಯಾಯಿತು. ಟೂರ್ನಿಯಿಂದ […]