ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಉಮಾ ರಮಣನ್ (72) ಇಹಲೋಕ ತ್ಯಜಿಸಿದ್ದಾರೆ. ಉಮಾ ಅವರು ಪತಿ ಎ.ವಿ. ರಮಣನ್ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆದರೆ, ಅವರ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಉಮಾ ಅವರ ನಿಧನಕ್ಕೆ ಚಿತ್ರಂಗ, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ಸಂಗೀತ ನಿರ್ದೇಶಕ ಇಳಯರಾಜ ಸಂಗೀತ ಸಂಯೋಜಿಸಿರುವ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡಿ ಉಮಾ ಹೆಚ್ಚು ಖ್ಯಾತಿ ಪಡೆದಿದ್ದಾರೆ. ವಿದ್ಯಾ ಸಾಗರ್, ಮಣಿ […]