ತಿರುಪತ್ತೂರು: ತಮಿಳುನಾಡಿನ ವಾಣಿಯಂಬಾಡಿಯ ಚೆಟ್ಟಿಯಪ್ಪನೂರು ಬಳಿಯ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ 5 ಜನ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಮತ್ತೊಂದು ಬದಿಯ ರಸ್ತೆಯಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಉಳುಂದೂರುಪೇಟೆ ಮೂಲದ ಸರ್ಕಾರಿ ಬಸ್ ಚಾಲಕ ಎಟುಮ್ಮಲೈ, ಕೋಲಾರದ […]