ಚೆನ್ನೈ: ತಮಿಳುನಾಡಿನಲ್ಲಿ ರೈತರೊಬ್ಬರು ತಮ್ಮ ಸ್ವಂತ ಹಣದಿಂದ ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನ ಕಟ್ಟಿದ್ದಾರೆ. ತಮಿಳುನಾಡಿನ ತಿರುಚ್ಚಿ ಬಳಿಯ ಸಾತನೂರಿನ ರೈತ, ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷವಾಗಿ ಗೌರವ ಸಲ್ಲಿಸಲು ದೇವಾಲಯವನ್ನು ನಿರ್ಮಿಸಿ ದ್ದಾರೆ. ತಾವು ದುಡಿದ ಸ್ವಂತ ಹಣದಿಂದ ಬರೋಬ್ಬರಿ 1.25 ಲಕ್ಷ ರೂಪಾಯಿ ಖರ್ಚು ಮಾಡಿ ದೇವಾಲಯ ನಿರ್ಮಿಸಿದ್ದಾರೆ. ತಿರುಚ್ಚಿ ಜಿಲ್ಲೆಯ ತರಿಯೌರ್ ಪ್ರದೇಶದ ಎರಕುಡಿ ಗ್ರಾಮದವರಾದ ರೈತ ಶಂಕರ್ ಅವರು ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಕೃಷಿ ಮಾಡಲು ತಮ್ಮ ಊರಿಗೆ ಮರಳಿದರು. […]