ನವದೆಹಲಿ: ಕಲ್ಲಿದ್ದಲು ಹಗರಣ ಆರೋಪದಲ್ಲಿ ಹಣ ವರ್ಗಾವಣೆ ಕೇಸ್ ಗೆ ಸಂಬಂಧಿಸಿ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ದೂರಿನಂತೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿಗೆ ದೆಹಲಿಯ ನ್ಯಾಯಾಲಯ ಶನಿವಾರ ಜಾಮೀನು ಸಹಿತ ವಾರೆಂಟ್ ಹೊರಡಿಸಿದೆ. ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ತನಿಖಾ ಏಜೆನ್ಸಿ ಅಥವಾ ಕೋರ್ಟ್ ಮುಂದೆ ರುಜಿರಾ ಹಾಜರಾಗಿಲ್ಲ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿಕೆ ನೀಡಿದ ನಂತರ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧ ಸರ್ವರಿಯಾ ಈ ಆದೇಶ […]