ನವದೆಹಲಿ: ರೈಲ್ವೆ ಇಲಾಖೆಯು ಹಳೆಯ ಪದ್ಧತಿಯನ್ನೇ ಮುಂದುವರಿಸಲು ತೀರ್ಮಾನಿಸಿದೆ. ಇದರಂತೆ, ರೈಲು ಪ್ರಯಾಣಿಕರು ಇನ್ನು ಮುಂದೆ ರೈಲು ಹೊರಡಲು ಕೇವಲ ಐದು ನಿಮಿಷ ಇರುವಾಗಲೂ ಟಿಕೆಟ್ ಕಾಯ್ದಿರಿಸಬಹು ದಾಗಿದೆ. ಇದು ಇದೇ ತಿಂಗಳ 10ರಿಂದಲೇ ಜಾರಿಯಾಗಲಿದೆ. ‘ಈ ಹಿಂದೆ ಇದ್ದಂತೆಯೇ ರೈಲು ಹೊರಡಲು 30ರಿಂದ 5 ನಿಮಿಷ ಮುಂಚಿತ ವಾಗಿ ಪ್ರಯಾಣಿಕರ ಎರಡನೇ ಮೀಸಲು ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ’ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭಿಸಿದಾಗ ರೈಲು ಹೊರಡಲು […]