ಹೈದರಾಬಾದ್: ರಿಯಲ್ ಸ್ಟಾರ್ ಉಪ್ಪೇಂದ್ರ, ಸೂಪರ್ ಸ್ಟಾರ್ ರಜನಿಕಾಂತ್, ರಮ್ಯಾ, ತಾರಾ, ಉಮಾಶ್ರೀ ಹೀಗೆ ಹಲವರು ಕಲಾವಿದರು ರಾಜಕೀಯದಲ್ಲಿ ಗುರುತಿಸಿಕೊಂಡಿದ್ದಾರೆ. ಮತ್ತೊಬ್ಬ ನಟಿಯು ರಾಜಕೀಯ ಕ್ಷೇತ್ರಕ್ಕೆ ಕಾಲಿಡುತ್ತಾರೆ ಎಂದು ವರದಿಯಾಗಿದೆ. ಬಹುಭಾಷಾ ನಟಿಯಾಗಿ ತ್ರಿಷಾ ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ನಟಿಸಿದ್ದ ‘ಪವರ್’ ಚಿತ್ರಕ್ಕೆ ನಾಯಕಿ ಆಗಿದ್ದರು. ಪುನೀತ್ ನಟಿಸಬೇಕಿದ್ದ ‘ದ್ವಿತ್ವ’ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿ ಆಯ್ಕೆ ಆಗಿದ್ದರು. ವಿವಿಧ ಚಿತ್ರಗಳಲ್ಲಿ ಬ್ಯುಸಿ ಇರುವ ತ್ರಿಷಾ ರಾಜಕೀಯದತ್ತ ಒಲವು ತೋರುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಎಂಜಿಆರ್, ಜಯಲಲಿತಾ […]