Saturday, 21st September 2024

ಲ್ಯಾಂಡಿಂಗ್ ಗೇರ್ ಸಮಸ್ಯೆ: ಚೆನ್ನೈನಲ್ಲಿ ವಿಮಾನ ತುರ್ತು ಲ್ಯಾಂಡಿಂಗ್‌

ಚೆನ್ನೈ: ಬೆಳಗಾವಿಯಿಂದ ಮೈಸೂರಿಗೆ ತೆರಳಿದ್ದ ವಿಮಾನವನ್ನು ಲ್ಯಾಂಡಿಂಗ್ ಗೇರ್ ಸಮಸ್ಯೆಯಿಂದಾಗಿ ಚೆನ್ನೈನಲ್ಲೇ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಐವರು ಸಿಬ್ಬಂದಿ, ಶಿಶು ಸೇರಿದಂತೆ ವಿಮಾನದಲ್ಲಿದ್ದ 52 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಬೆಳಗಾವಿಯಿಂದ ಮೈಸೂರಿಗೆ ತೆರಳುವ ಟ್ರುಜೆಟ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವನ್ನು ಲ್ಯಾಂಡಿಂಗ್ ಗೇರ್ ಸಮಸ್ಯೆಯಿಂದಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದೆ ಓದಿ