ತುಮಕೂರು: ಹಿಂದೂ ಮಹಾಗಣಪತಿ ಸ್ವಾಗತ ಸಮಿತಿಯಿಂದ ನಗರದ ಬಿಜಿಎಸ್ ವೃತ್ತದ ಬಳಿಯ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ದಿನ ಸೆ. 7ರಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸ ಲಾಗುತ್ತದೆಂದು ಮಹಾಗಣಪತಿ ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 16 ವರ್ಷದಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಗಣಪತಿ ಉತ್ಸವ ಆಚರಿಸಲಾಗುತ್ತಿದೆ. ಹಿಂದೂಗಳಲ್ಲಿ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವನೆ ಮೂಡಿಸಲು ಹಬ್ಬ ಆಚರಿಸಲಾಗುತ್ತಿದೆ ಎಂದರು. 15 ದಿನಗಳ ಕಾಲ ಗಣೇಶ ಉತ್ಸವ ನಡೆಯಲಿದೆ. ಪ್ರತಿ […]