ಉಳ್ಳಾಲ: ಸೋಮೇಶ್ವರದ ಅಲಿಮಕಲ್ಲು ಸಮೀಪ ಶನಿವಾರ ಸಮುದ್ರದಲ್ಲಿ ಪ್ರಾಣ ಕಳೆದುಕೊಂಡಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಅದೇ ಪ್ರದೇಶದಲ್ಲಿ ಭಾನುವಾರ ದೊರೆತಿದೆ. ಭಾನುವಾರ ಬೆಳಗ್ಗಿನವರೆಗೂ ಸ್ಥಳೀಯ ಈಜುಗಾರರು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಮೃತರೆಂದು ಗುರುತಿಸ ಲಾಗಿದೆ. ಸೋಮೇಶ್ವರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಯಶ್ವಿತ್, ಯುವರಾಜ ಸೇರಿದಂತೆ ಒಟ್ಟು ಆರು ಮಂದಿ ವಿದ್ಯಾರ್ಥಿಗಳು ಶನಿವಾರ […]