ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವೆಯನ್ನು ಒಂದು ವರ್ಷ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಭಲ್ಲಾ ಅವರ ಹಾಲಿ ಸೇವೆ ಮುಂದಿನ ವಾರ ಕೊನೆಯಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರ ಸೇವೆಯನ್ನು ಒಂದು ವರ್ಷ ವಿಸ್ತರಿಸಿದೆ. ಅಸ್ಸಾಂ-ಮೇಘಾಲಯ ಕೇಡರ್‌ನ 1984ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಭಲ್ಲಾ ಅವರು ಆಗಸ್ಟ್ 2019ರಲ್ಲಿ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಸಂಪುಟ ನೇಮಕಾತಿ ಸಮಿತಿಯು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಈಗಿನ ಅವಧಿಯನ್ನು […]