ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ನದಿಯಲ್ಲಿ ಪ್ರವಾಹ ಉಂಟಾದ ಪರಿಣಾಮ ಇದು ವರೆಗೆ 32 ಜನರು ಮೃತಪಟ್ಟಿದ್ದು, ಸುಮಾರು 206 ಜನರು ನಾಪತ್ತೆಯಾಗಿದ್ದಾರೆ. ತಪೋವನ- ವಿಷ್ಣುಗಡ ಯೋಜನೆಯ ಸುರಂಗದಲ್ಲಿ ಸಿಲುಕಿಕೊಂಡಿದ್ದ 32 ಕಾರ್ಮಿಕರನ್ನು ರಕ್ಷಿಸಲಾಗಿದೆ. ಎನ್‌ಟಿಪಿಸಿಯ 480 ಮೆಗಾವಾಟ್ ಸಾಮರ್ಥ್ಯದ ತಪೋವನ-ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವಾಟ್ ಸಾಮರ್ಥ್ಯದ ರಿಷಿ ಗಂಗಾ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ. ಸುಮಾರು 13 ಹಳ್ಳಿಗಳು ಹೊರಗಿನ ಸಂಪರ್ಕ ಕಳೆದುಕೊಂಡಿವೆ. ಹಳ್ಳಿಗಳನ್ನು ಸಂಪರ್ಕಿಸುವ […]