ನವದೆಹಲಿ/ಲಕ್ನೋ: ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಉತ್ತರಪ್ರದೇಶ ಎಲ್ಲಾ ಪಕ್ಷಗಳಿಗೂ ನಿರ್ಣಾಯಕವಾಗಿದ್ದು, 80 ಲೋಕಸಭಾ ಕ್ಷೇತ್ರಗಳ ಪೈಕಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಎನ್ ಡಿಎ ತೀವ್ರ ಹಿನ್ನಡೆ ಅನುಭವಿಸಿರುವುದು ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅಂದಾಜು 70ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಹೊಂದಿತ್ತು. ಆದರೆ ಫಲಿತಾಂಶದಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದೆ. ಉತ್ತರಪ್ರದೇಶದಲ್ಲಿ ಈ ಬಾರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ […]