ನವದೆಹಲಿ: ಹಿರಿಯ ನ್ಯಾಯಾಧೀಶರು ಮತ್ತು ಅವರ ಸಹೋದ್ಯೋಗಿಗಳು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶೆಯೊಬ್ಬರು ತನಗೆ ದಯಾಮರಣ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಷಯದ ಬಗ್ಗೆ ಅಲಹಾಬಾದ್ ಹೈಕೋರ್ಟ್ನಿಂದ ಸ್ಪಷ್ಟನೆ ಕೋರಿದ್ದಾರೆ. ಅಲ್ಲದೇ ಪತ್ರವನ್ನೇ ಅರ್ಜಿಯನ್ನಾಗಿ ಪರಿಗಣಿಸಿರುವ ಚಂದ್ರಚೂಡ್, ಇವತ್ತೇ ಪ್ರಕರಣದ ವಿಚಾರಣೆ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ. “ದಯವಿಟ್ಟು ನನ್ನ ಜೀವನವನ್ನು ಗೌರವಯುತವಾಗಿ […]