ಜಮ್ಮು: 13 ಮಂದಿ ವಿದ್ಯಾರ್ಥಿಗಳಲ್ಲಿ ಕರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ವಿಶ್ವವಿದ್ಯಾಲಯವನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಮೂಲ ಶಿಬಿರ ಕತ್ರಾ ಪಟ್ಟಣದ ಸಮೀಪವೇ ಕಕ್ರಿಯಾಲ್‌ನ ವಿಶ್ವವಿದ್ಯಾಲಯವಿದ್ದು, ಸೋಂಕು ನಿಯಂತ್ರಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಾತ್ರಿಪಡಿಸಲು ವಿವಿಯನ್ನು ಬಂದ್ ಮಾಡಲಾಗಿದೆ ಎಂದು ರಿಯಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ. ಡಿ.31 ಮತ್ತು ಜನವರಿ 1 ರಂದು ವಿಶ್ವವಿದ್ಯಾಲಯದಲ್ಲಿ COVID-19 ಪರೀಕ್ಷೆ ನಡೆಸಲಾಗಿತ್ತು, ಈ ವೇಳೆ […]