Friday, 13th December 2024

ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ(79) ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ಮೂಲಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ಇನ್ನಿಲ್ಲವಾಗಿದ್ದಾರೆ. ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು ಜನವರಿ 15, 1946ರಲ್ಲಿ ಜನಿಸಿದ್ದರು. 1972ರಲ್ಲೇ ಚುನಾವಣಾ ರಾಜಕೀಯಕ್ಕೆ ಧುಮುಕಿದ ವಸಂತ ಬಂಗೇರ ಅವರು, ಕುವೆಟ್ಟು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ […]

ಮುಂದೆ ಓದಿ