ಬೆಂಗಳೂರು: ಕೊಲೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಪೋಸ್ಟ್ ಮಾಡಿದ್ದು, ಸಾಕಷ್ಟು ವೈರಲ್ ಆಗಿದೆ. ಈ ಪೋಸ್ಟ್’ಗೆ ಅಭಿಮಾನಿಗಳಿಂದ ಧನಾತ್ಮಕವಾಗಿ ಪ್ರತಿಕ್ರಿಯೆ ಬಂದಿರುತ್ತದೆ. ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, […]