ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಬಹಿರಂಗ ಪ್ರಚಾರಕ್ಕೆ ಮೇ 5ರಂದು ಸಂಜೆ 6ಕ್ಕೆ ತೆರೆ ಬೀಳಲಿದೆ. ‘ಭಾನುವಾರ ಸಂಜೆ 6ರೊಳಗೆ ಎಲ್ಲ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಗಳ ಪರ ಪ್ರಚಾರಕರು ತಮ್ಮ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು. ಕ್ಷೇತ್ರದ ಮತದಾರರಲ್ಲದ ನಾಯಕರು ಜಿಲ್ಲೆ ಬಿಟ್ಟು ತೆರಳಬೇಕು. ನಂತರದ 48 ಗಂಟೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ’ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಟಿ.ಭೂಬಾಲನ್ ಮಾಹಿತಿ ನೀಡಿದ್ದಾರೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಂಟು […]