ತಮಿಳುನಾಡು: ಸೇತುಪತಿ ಅಭಿನಯದ 50ನೇ ಚಿತ್ರ ‘ಮಹಾರಾಜ’ ಬಾಕ್ಸ್ ಆಫೀಸ್ನಲ್ಲಿ ಹೆಚ್ಚಿನ ಭರವಸೆ ಮೂಡಿಸದೇ ಹೋದರೂ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆದ ಮೊದಲ ದಿನದಿಂದಲೂ ಸಖತ್ ಸದ್ದು ಮಾಡುತ್ತಿದೆ. ತಮಿಳು ನಟ ವಿಜಯ್ ಸೇತುಪತಿ ಅಭಿನಯದ ‘ಮಹಾರಾಜ’ ಸಿನಿಮಾ ಇತ್ತೀಚೆಗಷ್ಟೇ ಅಧಿಕೃತವಾಗಿ ಒಟಿಟಿ ಪ್ಲಾಟ್ಫಾರ್ಮ್ ಆದ ನೆಟ್ಫ್ಲಿಕ್ಸ್ಗೆ ಎಂಟ್ರಿ ಕೊಟ್ಟಿತು. ಭಾರತೀಯ ಚಿತ್ರರಂಗದಲ್ಲಿ ತನ್ನದೇ ವಿಶೇಷ ಅಭಿಮಾನಿಗಳ ಬಳಗ ಹೊಂದಿರುವ ವಿಜಯ್ ಸೇತುಪತಿ, ಸಿನಿಪ್ರೇಕ್ಷಕರು ಅತಿಯಾಗಿ ಇಷ್ಟಪಡುವ ಪ್ರಮುಖ ಸ್ಟಾರ್ ನಟರಲ್ಲಿ ಒಬ್ಬರು. ನಿಥಿಲನ್ ಸ್ವಾಮಿನಾಥನ್ ನಿರ್ದೇಶನದ ‘ಮಹಾರಾಜ’ […]