ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿಯವರು ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು, ಸೊಂಟ ಹಾಗೂ ಕಾಲಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯ ಬಚ್ಚಲು ಮನೆಯಲ್ಲಿ ಹಿರಿಯ ನಟಿ ಕಾಲು ಜಾರಿ ಬಿದ್ದಿರುವುದು ತಿಳಿದು ಬಂದಿದೆ. ಈ ವಿಷಯವನ್ನು ಪುತ್ರ, ನಟ ವಿನೋದ್ ರಾಜ್ ಕುಮಾರ್ ತಿಳಿಸಿದ್ದು, ಮನೆಯಲ್ಲಿ ಕಾಲುಜಾರಿ ಬಿದ್ದು ತಾಯಿ ಲೀಲಾವತಿಗೆ ಪೆಟ್ಟಾಗಿದೆ. ಕೂಡಲೇ ಅವರನ್ನು ವೈದ್ಯರ ಬಳಿ ಚಿಕಿತ್ಸೆಗಾಗಿ ಕರೆದೊಯ್ದು, […]