ನವದೆಹಲಿ: ಬೃಹತ್ ಸಂಸತ್ ಭವನ ಒಳಗೊಂಡಂತೆ ವಿವಿಧ ಯೋಜನೆಗಳನ್ನು ನಿರ್ಮಿಸುವ ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ. ಸರ್ಕಾರ ಮತ್ತು ಸೆಂಟ್ರಲ್ ವಿಸ್ಟಾ ಸಮಿತಿಯ ಯೋಜನೆಗೆ ಅನುಮತಿ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಅನೇಕರು, ಅದರ ಪಾರದರ್ಶಕತೆಯನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ಎಎಂ ಖನ್ವಿಲ್ಕರ್ ನೇತೃತ್ವದಲ್ಲಿ ನ್ಯಾಯಮೂರ್ತಿ ಗಳಾದ ದಿನೇಶ್ ಮಾಹೇಶ್ವರಿ ಮತ್ತು ಸಂಜೀವ್ ಖನ್ನಾ ಅವರನ್ನು ಒಳಗೊಂಡ ಮೂವರು ಸದಸ್ಯರ ನ್ಯಾಯಪೀಠ ಈ ಆದೇಶ ನೀಡಿದೆ. […]