ನವದೆಹಲಿ: ಅಕ್ರಮ ಹಣ ವರ್ಗಾವಣೆ ಶಂಕೆಯ ಮೇಲೆ ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ ನಡೆದಿದೆ. ದೇಶದ 44 ಪ್ರದೇಶಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳ ವಾರ ಇಡಿ ಅಧಿಕಾರಿಗಳು ಚೀನಾದ ಮೊಬೈಲ್ ಉತ್ಪಾದಕ ಕಂಪನಿ ವಿವೋಗೆ ಸೇರಿದ 44 ಪ್ರದೇಶಗಳ ಮೇಲೆ ದಾಳಿ ಮಾಡಿದ್ದಾರೆ. ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಹ ದಾಳಿ ನಡೆಸಿದ್ದರು. ಆದಾಯ ತೆರಿಗೆ ಇಲಾಖೆ ದಾಳಿಯ ವರದಿ ಬಳಿಕ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ […]