ಪಟಿಯಾಲ: ಮಹಿಳಾ ಟಿ20 ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಕೋವಿಡ್-19 ದೃಢಪಟ್ಟಿದೆ. ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಕೊನೆಗೊಂಡ ಸರಣಿಯ ಐದನೇ ಏಕದಿನ ಪಂದ್ಯದಲ್ಲಿ ಗಾಯಗೊಂಡ ಹಿನ್ನೆಲೆಯಲ್ಲಿ, ಟಿ20 ಸರಣಿಯಲ್ಲಿ ಕಣಕ್ಕಿಳಿದಿರಲಿಲ್ಲ. ಸೋಮವಾರ ಜ್ವರದ ಲಕ್ಷಣಗಳು ಕಂಡುಬಂದ ಕಾರಣ ಪರೀಕ್ಷೆ ಮಾಡಿಸಿಕೊಂಡಾಗ ಕೋವಿಡ್ ಇರುವುದು ದೃಢಪಟ್ಟಿದೆ. ಕೌರ್ ಸದ್ಯ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದಾರೆ. ಕೊರೊನಾ ಸೋಂಕು ಪತ್ತೆಯಾಗಿದೆ. ಸದ್ಯ ಅವರು ಆರೋಗ್ಯವಾಗಿದ್ದು, ಶೀಘ್ರ ಚೇತರಿಸಿಕೊಳ್ಳಲಿದ್ದಾರೆ’ ಎಂದು ಕೌರ್ ಆಪ್ತರೊಬ್ಬರು ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ […]