ಮೇಲ್ಬರ್ನ್: ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗಾಗಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಸರಣಿಯಿಂದ ನಾಯಕ ಪ್ಯಾಟ್ ಕಮಿನ್ಸ್ ಹೊರಗುಳಿದಿದ್ದು, ಆಲ್ರೌಂಡರ್ ಆಟಗಾರ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಲಿದ್ದಾರೆ. ಬೆನ್ನಲ್ಲೇ ಮುಂಬರುವ ಟಿ20 ವಿಶ್ವಕಪ್ನಲ್ಲೂ ಆಸ್ಟ್ರೇಲಿಯಾ ತಂಡವನ್ನು ಮಾರ್ಷ್ ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ಈ ಬಳಗದಲ್ಲಿ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದಾರೆ. ಒಂದು ವೇಳೆ ವೆಸ್ಟ್ ಇಂಡೀಸ್ ಸರಣಿಯಲ್ಲಿ ಹಾಗೂ ಐಪಿಎಲ್ನಲ್ಲಿ ಮಿಂಚಿದರೆ ಟಿ20 ವಿಶ್ವಕಪ್ ತಂಡದಲ್ಲೂ ಡೇವಿಡ್ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ […]