ಮುಂಬೈ: ದೇಶ-ವಿದೇಶದ ಕ್ರಿಕೆಟ್ ಪ್ರೇಮಿಗಳಿಗೆ ಇಂದಿನ ದಿನವನ್ನು ಮರೆಯಲು ಸಾಧ್ಯವಿಲ್ಲ. ಕ್ರಿಕೆಟ್ ಅನ್ನು ಒಂದು ಧರ್ಮ ವೆಂದು ಪರಿಗಣಿಸುವ ಭಾರತೀಯರಿಗೆ ಇಂದಿನ ದಿನ ಬಹು ವಿಶಿಷ್ಠ. ಏಕೆಂದರೆ 2011 ರಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಕ್ರಿಕೆಟ್ ದಿನ ಇದಾಗಿದೆ. ಈ ಸಂಭ್ರಮವನ್ನು 10 ವರ್ಷಗಳ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ವಿಶೇಷವಾಗಿ ಆಚರಿಸಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಬಳಕೆದಾರರು ತಡರಾತ್ರಿಯಿಂದ ಭಾರತ ವಿಶ್ವಕಪ್ ಗೆದ್ದ ಕ್ಷಣವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ. […]