Saturday, 20th August 2022

ಹಾಸ್ಯ ನಟ ಟೆನ್ನಿಸ್ ಕೃಷ್ಣ ನಾಳೆ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

ಬೆಂಗಳೂರು: ಟೆನ್ನಿಸ್ ಕೃಷ್ಣ ಅವರು ಇದೀಗ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಹೊಸ ಪಕ್ಷಕ್ಕೆ ಸೇರ್ಪಡೆಯಾಗ ಲಿದ್ದಾರೆ.
ಕನ್ನಡ ಚಿತ್ರರಂಗದ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರ ಹಾಸ್ಯವು ಸಿನಿಮಾ ಗಳಲ್ಲಿ ಬಹಳ ಪ್ರಮುಖ ಪಾತ್ರವಹಿಸುತ್ತಿದ್ದವು. ಇದೀಗ ಅವರು ಕೊಂಚ ಸಿನಿಮಾದಿಂದ ದೂರ ಉಳಿದಿದ್ದು, ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ನಟ ಟೆನ್ನಿಸ್ ಕೃಷ್ಣ ಅವರು ಇದೀಗ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅವರು ನಾಳೆ ಆಮ್ ಆದ್ಮಿ ಪಾರ್ಟಿಗೆ ಸೇರಲಿದ್ದಾರೆ. ಬೆಂಗಳೂರಿನಲ್ಲಿ ಆಮ್​ ಆದ್ಮಿ ಪಾರ್ಟಿಯ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಅವರು ಅಧಿಕೃತ ವಾಗಿ ಆಪ್​ ಪಕ್ಷಕ್ಕೆ ಟೆನ್ನಿಸ್ ಕೃಷ್ಣ ಅವರು ಸೇರಿಕೊಳ್ಳಲಿದ್ದಾರೆ. ಈ ವೇಳೆ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರು ಉಪಸ್ಥಿ ಯಲ್ಲಿರುತ್ತಾರೆ ಎನ್ನಲಾಗಿದೆ.

2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಜರುಗಲಿದೆ. ಹೀಗಾಗಿ ಈಗಾಗಲೇ ಎಲ್ಲಾ ಪಕ್ಷಗಳು ಸಿದ್ಧತೆ ನಡೆಸುತ್ತಿವೆ. ಇದರ ಭಾಗವಾಗಿ ಆಮ್​ ಆದ್ಮಿ ಪಕ್ಷ ಸಹ ಭರ್ಜರಿಯಾಗಿ ತಯಾರಿ ನಡೆಸುತ್ತಿದ್ದು, ಸ್ಟಾರ್​ ನಟರುಗಳನ್ನು ಪಕ್ಷಕ್ಕೆ ಸೇರಿಸಿ ಕೊಳ್ಳುತ್ತಿದೆ. ಈಗಾಗಲೇ ಪಂಜಾಬ್ ಚುನಾವಣೆಯಲ್ಲಿ ಆಪ್​ ಗೆದ್ದು, ಸರ್ಕಾರ ರಚಿಸಿದ್ದು, ಮುಂಬರುವ ಕರ್ನಾಟಕದ ಚುನಾವಣೆಯಲ್ಲಿಯೂ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಸರ್ಕಾರವನ್ನು ರಚಿಸುವ ಹುಮ್ಮಸ್ಸಿನಲ್ಲಿದೆ. ಈ ಕಾರಣಕ್ಕಾಗಿ ಪಕ್ಷಕ್ಕೆ ಅನೇಕರನ್ನು ಸೇರಿಸುತ್ತಿದೆ.