Saturday, 10th April 2021

ಸಂಸದ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ: ಪ್ರಕರಣ ದಾಖಲು

ಶಿರಸಿ : ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ ಬಂದಿದ್ದು, ಉರ್ದು ಮಿಶ್ರಿತ ಭಾಷೆಯಲ್ಲಿ ಅನಾಮಧೇಯ ವ್ಯಕ್ತಿ ಜೀವ ಬೆದರಿಕೆ ಕರೆ ಹಾಕಿರುವ ಕುರಿತು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಬಾರಿ ಕರೆ ಮಾಡಿದಾಗ ದೂರು ನೀಡಿದ್ದೀಯ? ಪತ್ರಿಕೆಯಲ್ಲೂ ಸುದ್ದಿಯಾಗಿತ್ತು. ನಿನ್ನನ್ನು ಏನು ಮಾಡುತ್ತೀನಿ ನೋಡು, ಸುಮ್ಮನೆ ಬಿಡುವುದಿಲ್ಲ ಎಂದು ಅನಾಮಧೇಯ ವ್ಯಕ್ತಿ ಬೆದರಿಕೆ ಹಾಕಿದ್ದಾಗಿ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶಟ್ಟಿ ರವರಿಂದ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳೆದ 2019 ಏಪ್ರಿಲ್ 20 ರಂದೂ‌ ಸಹ ಇದೇ ರೀತಿಯಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ್ದ ಎಂದು ತಿಳಿಸಲಾಗಿದೆ. ಅಲ್ಲದೇ ಈ ಹಿಂದೆಯೂ ಅನೇಕ ಬಾರಿ ಸಂಸದರಿಗೆ ಬೆದರಿಕೆ ಕರೆ ಬಂದಿರುವ ಕುರಿತು ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *