Wednesday, 28th July 2021

ದಾವಣಗೆರೆ: ಇಂದಿನಿಂದ ಮೂರು ದಿನ ಲಾಕ್‌ಡೌನ್‌

ದಾವಣಗೆರೆ: ಜಿಲ್ಲೆಯಲ್ಲಿ ಕರೋನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದನ್ನು ನಿಯಂತ್ರಿಸಲು ಇಂದಿನಿಂದ ಮೇ 24ರ ಬೆಳಿಗ್ಗೆ 6ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟಲು ಜಾರಿಗೆ ತರುತ್ತಿ ರುವ ಸಂಪೂರ್ಣ ಲಾಕ್‍ಡೌನ್‍ಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮೇ 12ರಿಂದ 24ರ ವರೆಗೆ ಕಠಿಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿತ್ತು. ಆದರೆ ಪ್ರಕರಣಗಳ ಸಂಖ್ಯೆ ಏರುತ್ತಲೆ ಇದೆ. ಸೋಂಕು ಹರಡುವಿಕೆಯ ಸರಪಳಿ ತುಂಡರಿಸಲು ಇನ್ನಷ್ಟು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ. ಮೇ 24ರ ಬಳಿಕ ಕೈಗೊಳ್ಳ ಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

 

Leave a Reply

Your email address will not be published. Required fields are marked *