Tuesday, 26th October 2021

ರಾಯನ್ ಸರ್ಕಲ್ ನಲ್ಲಿ ಸಿಲಿಂಡರ್ ಸ್ಪೋಟ: ಮೂವರ ಸಾವು

ಬೆಂಗಳೂರು : ಚಾಮರಾಜಪೇಟೆಯ ರಾಯನ್ ಸರ್ಕಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರೋ ಘಟನೆ ನಡೆದಿದೆ. ಇನ್ನೂ ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ ಅಕ್ಕ ಪಕ್ಕದ ಮನೆಯವರೂ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳು ಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದಾಗಿ ರಾಜಧಾನಿಯ ಜನರು ಬೆಚ್ಚಿ ಬೀಳುವಂತೆ ಆಗಿದೆ.

ಎರಡು ದಿನಗಳ ಹಿಂದಷ್ಟೇ ದೇವರಚಿಕ್ಕನಹಳ್ಳಿಯ ಅಪಾರ್ಮೆಂಟ್ ಒಂದರಲ್ಲಿ ಬೆಂಕಿ ಹೊತ್ತಿ ಕೊಂಡು ಇಬ್ಬರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಚಾಮರಾಜಪೇಟೆಯ ರಾಯನ್ ಸರ್ಕಲ್ ನಲ್ಲಿ ನಡೆದಿದೆ. ಈ ಘೋರ ದುರಂತದಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಸ್ಫೋಟದ ತೀವ್ರತೆಗೆ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ನ್ಯೂ ತಗರುಪೇಟೆಯಲ್ಲಿ ಮಧ್ಯಾಹ್ನ ದುರ್ಘಟನೆ ಸಂಭವಿಸಿದೆ. ಸ್ಫೋಟಕ್ಕೆ ಹಲವರಿಗೆ ಗಾಯಗಳಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ಒಂದಷ್ಟು ದೂರ ಹಾರಿ ಹೋಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ.

Leave a Reply

Your email address will not be published. Required fields are marked *