Tuesday, 9th August 2022

ಬೆಂಗಳೂರಿನಲ್ಲಿ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಎದುರಾಗಿದೆ. ನಗರದಲ್ಲಿ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಿಗೆ ಹಾಗೂ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಒಂದು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಟೈಪ್ ಒನ್ ಡಯಾಬಿಟಿಸ್ ಇರುವ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಮಕ್ಕಳಲ್ಲಿ ಇಮ್ಯುನಿಟಿ ಕಡಿಮೆ ಇರುತ್ತದೆ. ಹೀಗಾಗಿ ಬ್ಲ್ಯಾಕ್ ಫಂಗಸ್ ಮೂವರು ಮಕ್ಕಳಲ್ಲಿ ಪತ್ತೆಯಾಗಿದೆ.