Tuesday, 26th October 2021

ಅಪಾರ್ಟ್ ಮೆಂಟ್’ನಲ್ಲಿ ಅಗ್ನಿ ದುರಂತ: ಮೂವರ ಸಜೀವ ದಹನ

ಬೆಂಗಳೂರು: ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ಸಿಲಿಂಡರ್ ಸೋರಿಕೆಯಾಗಿ, ಬೆಂಕಿ ಹೊತ್ತುಕೊಂಡಿದ್ದು, ಮೂವರು ಸಜೀವ ದಹನವಾಗಿದ್ದಾರೆ.

ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿ ಇರುವ ಆಶ್ರಿತ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಂದು ಫ್ಲೋರ್ ನಿಂದ ಮೂರು ಫ್ಲೋರ್ ಗೆ ಬೆಂಕಿ ವ್ಯಾಪಿಸಿದೆ. ಫ್ಲ್ಯಾಟ್ ನಲ್ಲಿದ್ದ ಮೂವರು ಮೃತಪಟ್ಟಿದ್ದು, ತಮ್ಮ ಪ್ರಾಣ ಉಳಿಸುವಂತೆ ಮಹಿಳೆ ಅಂಗಲಾಚುತ್ತಿದ್ದರು. ಆದರೆ ಕೆಲಕ್ಷಣದಲ್ಲೇ ಬೆಂಕಿಯ ಕೆನ್ನಾlಗೆಗೆ ಮಹಿಳೆಯು ಸಜೀವ ದಹನವಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆಶ್ರಿತ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ನಲ್ಲಿದ್ದ ಐವರ ಪೈಕಿ ಮೂವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಅವರು ಕುಟುಂಬದ ಮಗ ಹಾಗೂ ಮಗಳು ಬೆಂಕಿಯಿಂದ ಬಚಾವ್ ಆಗಿ ತಪ್ಪಿಸಿಕೊಂಡು ಬಂದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ದೇವರಚಿಕ್ಕನಹಳ್ಳಿಯಲ್ಲಿ ಇರುವ ಆಶ್ರಿತ್ ಅಪಾರ್ಟ್‌ಮೆಂಟ್‌ನ ಬೇರೆ ಭಾಗಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿ ಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವುದಕ್ಕೆ ಹರಸಾಹಸಪಟ್ಟರು.

ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಅಕ್ಕಪಕ್ಕದ ಫ್ಲ್ಯಾಟ್ ಮಂದಿಗೆ ಹೊರಗಡೆ ಓಡಿ ಬಂದು ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ. ಮಧ್ಯಾಹ್ನದ ವೇಳೆ ಬಹುತೇಕ ಜನರು ಕಚೇರಿಗೆ ತೆರಳಿದ್ದರಿಂದ ದೊಡ್ಡ ದುರಂತ ತಪ್ಪಿದೆ. 

Leave a Reply

Your email address will not be published. Required fields are marked *