Wednesday, 14th April 2021

ಇಂದು ರಾಜ್ಯ ಬಜೆಟ್‌: ಸಿಎಂ ಬಿಎಸ್’ವೈ ಮೇಲೆ ನಿರೀಕ್ಷೆಯ ಮಹಾಪೂರ

ಬೆಂಗಳೂರು: ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ 8ನೇ ಬಜೆಟ್ ಮಂಡನೆ ಮಾಡಲಿದ್ದಾರೆ.

ಆರ್ಥಿಕತೆಗೆ ಟಾನಿಕ್ ನೀಡಲು 2021-2022ನೇ ಸಾಲಿನ ಆಯವ್ಯಯದಲ್ಲಿ ಯಾವ ಯಾವ ಕ್ರಮಗಳನ್ನು ಅನುಸರಿಸಲಿದ್ದಾ ರೆಂಬುದು ಜನರಲ್ಲಿ ಕುತೂಹಲ ಮೂಡಿಸಿದೆ. ಇದೀಗ ಮುಖ್ಯಮಂತ್ರಿಯಾಗಿ ಐದನೇ ಹಾಗೂ ಒಟ್ಟಾರೆ ಈ ವರೆಗೆ 7 ಬಜೆಟ್ ಮಂಡಿಸಿರುವ ಅವರು, ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನ ತಮ್ಮ 8ನೇ ಬಜೆಟ್ ಮಂಡಿಸುತ್ತಿದ್ದಾರೆ.

ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ಮಹಿಳೆಯರಿಗಾಗಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಘೋಷಿಸುವ ನಿರೀಕ್ಷೆಗಳಿವೆ.

ಈಗಾಗಲೇ ಸ್ಥಗಿತಗೊಳಿಸಿರುವ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದ ಯೋಜನೆಗಳಿಗೆ ಅಧಿಕೃತ ಕತ್ತರಿ ಬೀಳುವ ಸಾಧ್ಯತೆಗಳಿವೆ. ಜೊತೆಗೆ ತಮ್ಮ ಸರ್ಕಾರಕ್ಕೆ ಹೆಸರು ತಂದುಕೊಡುವ ನಿಟ್ಟಿನಲ್ಲಿ ಮಹಿಳೆಯರು ಹಾಗೂ ರೈತರಿಗೆ ವಿಶೇಷ ಕೊಡುಗೆಗಳನ್ನು ಘೋಷಿಸುವ ಸಾಧ್ಯತೆಗಳಿವೆ. ಆರೋಗ್ಯ ಇಲಾಖೆಯಲ್ಲಿ ಪ್ರತಿ ಹೋಬಳಿ ಮಟ್ಟದಲ್ಲೂ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಮಹತ್ವಾಕಾಂಕ್ಷಿ ಯೋಜನೆ ಸೇರಿದಂತೆ ಹಲವು ಘೋಷಣೆಗಳನ್ನು ಮಾಡುವ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *