ಮಾಜಿ ಸಚಿವ, ಸ್ವಾತಂತ್ರ್ಯ ಹೋರಾಟಗಾರ ಭೀಮಣ್ಣ ಖಂಡ್ರೆ ವಿಧಿವಶ!
ಶತಾಯುಷಿ ಹಾಗೂ ಕರ್ನಾಟಕದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಜನವರಿ16 ರಂದು ಕೊನೆಯುಸಿರೆಳೆದಿದ್ದಾರೆ. ಅವರಿಗೆ 103 ವರ್ಷ ವಯಸ್ಸಾಗಿತ್ತು. ಬೀದರ್ ಜಿಲ್ಲೆಯ ಭಾಲ್ಕಿಯ ತಮ್ಮ ಸ್ವಗೃಹದಲ್ಲಿ ಅವರು ಇಹಲೋಕ ತ್ಯಜಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಭೀಮಣ್ಣ ಖಂಡ್ರೆ ತಮ್ಮನ್ನು ತೊಡಗಿಸಿಕೊಂಡಿದ್ದರು.