ಹೃದಯಾಘಾತ ಹೆಚ್ಚಳಕ್ಕೆ ಕೊರೊನಾ ಲಸಿಕೆ ಕಾರಣವೇ? ಇಲ್ಲಿದೆ ಉತ್ತರ
ಇತ್ತೀಚೆಗೆ ಹೃದಯಾಘಾತದಿಂದ ಸಾವುಗಳು ಹೆಚ್ಚಾಗುತ್ತಿದ್ದು, ಕೋವಿಡ್ ಲಸಿಕೆ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಭಾರತದಲ್ಲಿ ಕೋವಿಡ್-19 ವೇಳೆ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸಿ ವಿತರಿಸಿದ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಹೃದಯಾಘಾತದಿಂದ ಉಂಟಾಗುವ ಮರಣಗಳಿಗೂ, ನಮ್ಮ ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.