ಇಂದಿನಿಂದ ಹೋಟೆಲ್‌ಗಳಿಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಹೆಚ್ಚಳ
ವಾಣಿಜ್ಯ ಸಿಲಿಂಡರ್ ಪೂರೈಕೆಯನ್ನು ಈ ಹಿಂದೆ ಶೇ. 30ರಷ್ಟು ಕಡಿತಗೊಳಿಸಲಾಗಿತ್ತು. ಇದರಿಂದ ಕೇವಲ ಬೆಂಗಳೂರು ಮಾತ್ರವಲ್ಲದೆ ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಜನಸಾಮಾನ್ಯರು ಮತ್ತು ಹೋಟೆಲ್ ಮಾಲೀಕರು ಪರದಾಡುವಂತಾಗಿತ್ತು. ಈಗ ಕೇಂದ್ರದ ಹೊಸ ಆದೇಶದಿಂದ ಹೋಟೆಲ್ ಉದ್ಯಮ ಮತ್ತೆ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ.