ಹೈಕಮಾಂಡ್ ಬುಲಾವ್; ಇಂದು ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎರಡೂ ಬಣಗಳ ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದೆ.