19 ವಿಧೇಯಕಗಳಿಗೆ ರಾಜ್ಯಪಾಲರ ಸಹಿ, ದ್ವೇಷ ಭಾಷಣ ಬಿಲ್ ಪೆಂಡಿಂಗ್
ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ- 2025 ಅನ್ನು ಅಂಗೀಕರಿಸಿತ್ತು. ವಿಧೇಯಕಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ವಿಪಕ್ಷಗಳ ವಿರೋಧದ ನಡುವೆ ಸರ್ಕಾರ ದ್ವೇಷ ಭಾಷಣ ಬಿಲ್ ಅಂಗೀಕರಿಸಿತ್ತು. ಇದೀಗ ರಾಜ್ಯಪಾಲರು ಈ ವಿಧೇಯಕವನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ.