90 ದಿನಗಳೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಹೆಬ್ಬಾಳ್ಕರ್
Laxmi Hebbalkar: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.