ಸಾಹಿತಿ, ಸಾಂಸ್ಕೃತಿಕ ಸಂಘಟಕ ಹೆರಂಜೆ ಕೃಷ್ಣ ಭಟ್ ನಿಧನ
ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರು, ವಿಭಾಗ ಮುಖ್ಯಸ್ಥರಾಗಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ್ದ ಭಟ್ಟರು (Heranje Krishna Bhat) ನಿವೃತ್ತಿಯ ಬಳಿಕ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕರಾಗಿ ಅನೇಕ ವರ್ಷಗಳ ಕಾಲ ಮಹತ್ವದ ಸೇವೆ ಸಲ್ಲಿಸಿದ್ದರು.