ಕಾಲ್ತುಳಿತ: ಐಪಿಎಸ್ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ
Bengaluru Stampede: ಅಮಾನತು ಪ್ರಶ್ನಿಸಿ ವಿಕಾಸ್ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಇದೀಗ, ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿದೆ.