ಕೊಪ್ಪಳದಲ್ಲಿ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಬಾಲಕ!
ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಾಲಕ ಮೊಬೈಲ್ ದಾಸನಾಗಿದ್ದ. ಆನ್‌ಲೈನ್ ಗೇಮ್ ಆಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕನ ತಾತ ನೀಡಿದ ದೂರಿನ ಮೇರೆಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.