ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

Gold Price Today On 1st April: ಮತ್ತೆ ಏರಿಕೆಯಾದ ಚಿನ್ನದ ದರ; ಇಂದು ಹೆಚ್ಚಾಗಿದ್ದು ಇಷ್ಟು

ಮತ್ತೆ ಏರಿಕೆಯಾದ ಚಿನ್ನದ ದರ

Gold Rate: ಬುಧವಾರ (ಏಪ್ರಿಲ್‌ 1) ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 180 ರುಪಾಯಿ ಹೆಚ್ಚಾಗಿದ್ದು13,885 ರುಪಾಯಿಗೆ ಏರಿಕೆಯಾಗಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 197 ರುಪಾಯಿ ಅಧಿಕವಾಗಿದ್ದು, 15,148 ರುಪಾಯಿಗೆ ಬಂದು ತಲುಪಿದೆ.

Channapatna News: ದಿನಾ ತಿಂಡಿ ಕೊಡುತ್ತಿದ್ದ ವೃದ್ಧೆಯ ಶವದ ಮೇಲೆ ಬಿದ್ದು ಹೊರಳಾಡಿ ದುಃಖಿಸಿದ ಕೋತಿ!

ತಿಂಡಿ ಕೊಡುತ್ತಿದ್ದ ವೃದ್ಧೆಯ ಶವದ ಮೇಲೆ ಬಿದ್ದು ಹೊರಳಾಡಿ ದುಃಖಿಸಿದ ಕೋತಿ!

ನಿತ್ಯ ಮನೆ ಬಳಿ ಬರುತ್ತಿದ್ದ ಕೋತಿಯನ್ನು ಪಾರ್ವತಮ್ಮ ಅವರು ತಿಂಡಿ ಕೊಟ್ಟು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಕೋತಿ ಜೊತೆ ನಿತ್ಯ ಒಡನಾಟ ಹೊಂದಿದ್ದ ವೃದ್ಧೆ ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ವೃದ್ಧೆ ಸಾವಿಗೆ ಕೋತಿ ಮೂಕರೋದನ ವ್ಯಕ್ತಪಡಿಸಿದೆ.

Hot weather: ಬಿಸಿಲ ತಾಪ: 9 ಜಿಲ್ಲೆಗಳ ಕಚೇರಿ ಸಮಯ ಬದಲಾವಣೆ, ಮಧ್ಯಾಹ್ನ 1.30ವರೆಗೂ ಮಾತ್ರ ಕೆಲಸ

ಬಿಸಿಲ ತಾಪ: 9 ಜಿಲ್ಲೆಗಳ ಕಚೇರಿ ಸಮಯ ಬದಲಾವಣೆ, ಮಧ್ಯಾಹ್ನ 1.30ರವರೆಗೆ ಓಪನ್

ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ನೌಕರರು ಕರ್ತವ್ಯ ನಿರ್ವಹಿಸಲು ಎದುರಿಸುತ್ತಿರುವ ತೊಂದರೆಗಳನ್ನು ಮನಗಂಡು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ನೌಕರರ ಒಕ್ಕೂಟಗಳು ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದವು. ಈ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ಸರ್ಕಾರ ಮಾನವೀಯ ದೃಷ್ಟಿಯಿಂದ ಕೆಲಸದ ಅವಧಿಯನ್ನು ಬದಲಾಯಿಸಿದೆ.

Petrol Price Hike: ಮತ್ತೊಂದು ಶಾಕ್:‌ ನಯಾರ ಬೆನ್ನಲ್ಲೇ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಸಿದ ಶೆಲ್‌

ಮತ್ತೊಂದು ಶಾಕ್:‌ ನಯಾರ ಬೆನ್ನಲ್ಲೇ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಸಿದ ಶೆಲ್

ಪ್ರೀಮಿಯಂ ಜೊತೆಗೆ ಸಾಮಾನ್ಯ ಪೆಟ್ರೋಲ್, ಡೀಸೆಲ್ ದರವೂ ಏರಿಕೆಯಾಗಿದೆ. ಸಾಮಾನ್ಯ ಪೆಟ್ರೋಲ್ ದರ ಮೊದಲು 106 ರೂ.ನಿಂದ 108.50 ರೂ. ಆಗಿತ್ತು. ನಾಲ್ಕು ದಿನದ ಹಿಂದೆ 112 ರೂ.ಗೆ ಏರಿಕೆ ಆಗಿತ್ತು. ಈಗ 119.8 ರೂ.ಗೆ ಏರಿಕೆಯಾಗಿದೆ. ಸಾಮಾನ್ಯ ಪೆಟ್ರೋಲ್ ದರ ಲೀಟರ್‌ಗೆ 7 ರೂ.ನಷ್ಟು ಹೆಚ್ಚಳವಾಗಿದೆ.

ಸನ್‌ಫೀಸ್ಟ್ ಡಾರ್ಕ್ ಫ್ಯಾಂಟಸಿ ‘ಎಸ್‌ಆರ್‌ಕೆ ಜೊತೆ ಸಂಭ್ರಮ’ ಅಭಿಯಾನಕ್ಕೆ ಹೊಸ ಮೆರುಗು: ಜಾಹೀರಾತು ಫಲಕದಲ್ಲೇ ನೇರ ಪಾರ್ಟಿ ಅನುಭವ

‘ಎಸ್‌ಆರ್‌ಕೆ ಜೊತೆ ಸಂಭ್ರಮ’ ಅಭಿಯಾನಕ್ಕೆ ಹೊಸ ಮೆರುಗು

ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದ್ದ ದೊಡ್ಡ ಡಾರ್ಕ್ ಫ್ಯಾಂಟಸಿ ಫಲಕ ಅಚಾನಕ್ ಜೀವಂತಗೊಂಡು, ಅದರ ಮೇಲೆ ನಟ ಶಾರುಖ್ ಖಾನ್ ಅವರ ದೃಶ್ಯ ಪ್ರಸಾರವಾಯಿತು. ಈ ಸಂದರ್ಭದಲ್ಲಿ ಅವರು “ಲಕ್ಷಾಂತರ ಅಭಿಮಾನಿಗಳ ಕನಸುಗಳನ್ನು ನನಸು ಮಾಡಲು ಬರುತ್ತಿದ್ದೇನೆ” ಎಂದು ಘೋಷಿಸಿದರು. ಕ್ಷಣಾರ್ಧದಲ್ಲಿ ಆ ಸ್ಥಳವು ಸಂಗೀತ, ಬೆಳಕು ಮತ್ತು ಸಂಭ್ರಮದಿಂದ ಕೂಡಿದ ಪಾರ್ಟಿ ವಾತಾವರಣಕ್ಕೆ ಮಾರ್ಪಟ್ಟಿತು. ಜನರು ಈ ದೃಶ್ಯವನ್ನು ವೀಕ್ಷಿಸಿ, ಚಿತ್ರೀಕರಿಸಿ, ಸಂಭ್ರಮದಲ್ಲಿ ಪಾಲ್ಗೊಂಡರು

ಹೊರಗುತ್ತಿಗೆ ನೌಕರರ ಬಿಡುಗಡೆ ಆದೇಶವೇ ನಕಲಿ: ಆರ್ಥಿಕ ಇಲಾಖೆ ಸ್ಪಷ್ಟನೆ

ಹೊರಗುತ್ತಿಗೆ ನೌಕರರ ಬಿಡುಗಡೆ ಆದೇಶವೇ ನಕಲಿ: ಆರ್ಥಿಕ ಇಲಾಖೆ ಸ್ಪಷ್ಟನೆ

ಇತ್ತೀಚೆಗೆ ಹಣಕಾಸು ಇಲಾಖೆಯ ಹೆಸರಿನಲ್ಲಿ ಅಧಿಕೃತ ಎನ್ನುವಂತೆ ಜ್ಞಾಪನಾ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದರಲ್ಲಿ, ಗುತ್ತಿಗೆ ಅವಧಿ ಮುಗಿದ ತಕ್ಷಣ ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡಬೇಕು ಎಂದು ಇಲಾಖಾ ಮುಖ್ಯಸ್ಥರಿಗೆ ಸೂಚಿಸಲಾಗಿತ್ತು. ಇದು ನೌಕರರಲ್ಲಿ ಭಾರಿ ಗೊಂದಲ ಮತ್ತು ಆತಂಕಕ್ಕೆ ಕಾರಣವಾಗಿತ್ತು.

Census: ಕರ್ನಾಟಕದಲ್ಲಿ ಇಂದಿನಿಂದ ಜನಗಣತಿ ಆರಂಭ, ಸಕ್ರಿಯವಾಗಿ ಪಾಲ್ಗೊಳ್ಳಲು ಗಣ್ಯರ ಕರೆ

ಕರ್ನಾಟಕದಲ್ಲಿ ಇಂದಿನಿಂದ ಜನಗಣತಿ ಆರಂಭ, ಪಾಲ್ಗೊಳ್ಳಲು ಗಣ್ಯರ ಕರೆ

ದೇಶಾದ್ಯಂತ ಮಹತ್ವದ ಜನಗಣತಿ ಇಂದಿನಿಂದ ಆರಂಭವಾಗಲಿದೆ. ಏಪ್ರಿಲ್ 1 ರಿಂದ ಏಪ್ರಿಲ್ 15ರವರೆಗೆ ನಾಗರಿಕರು ಹೊಸದಾಗಿ ಪರಿಚಯಿಸಲಾದ ‘ಸ್ವಯಂ ಗಣತಿ ಪೋರ್ಟಲ್’ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 16 ರಿಂದ ಮೇ 15ರವರೆಗೆ ಎರಡನೇ ಹಂತ ನಡೆಯಲಿದ್ದು, ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಪಟ್ಟಿ ತಯಾರಿಕೆ ಮತ್ತು ವಸತಿ ಗಣತಿ ನಡೆಸಲಿದ್ದಾರೆ

Bengaluru Karaga: ಇಂದು ಐತಿಹಾಸಿಕ ಹೂವಿನ ಕರಗ ಮೆರವಣಿಗೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಇಂದು ಐತಿಹಾಸಿಕ ಹೂವಿನ ಕರಗ ಮೆರವಣಿಗೆ, ಈ ರಸ್ತೆಗಳಲ್ಲಿ ಟ್ರಾಫಿಕ್‌ ಬದಲಾವಣೆ

ಏಪ್ರಿಲ್ 1ರ ರಾತ್ರಿ 9 ರಿಂದ ಮರುದಿನ ಅಂದರೆ ಏಪ್ರಿಲ್ ಬೆಳಗ್ಗೆ 7 ರವರೆಗೆ ಕರಗ ಉತ್ಸವ ಹೊರಡುವ ಕೆಲವು ರಸ್ತೆಯಲ್ಲಿ ವಾಹನ ಸಂಚಾರ ಬದಲಾವಣೆ (traffic alert) ಮಾಡಲಾಗಿದೆ. ಹೀಗಾಗಿ ವಾಹನ ಸವಾರರು ಈ ಕೆಳಗೆ ನೀಡಿರುವ ರಸ್ತೆಗಳಲ್ಲಿ ಸಂಚರಿಸುವ ಬದಲು ಬೇರೆ ಮಾರ್ಗವಾಗಿ ತೆರಳಬೇಕು ಎಂದು ಸಂಚಾರ ಪೊಲೀಸರು ಸೂಚಿಸಿದ್ದಾರೆ.

Driving Licence: ವಾಹನ ಸವಾರರಿಗೆ ಗುಡ್‌ ನ್ಯೂಸ್‌, ಅವಧಿ ಮುಗಿದರೂ 30 ದಿನ ಡಿಎಲ್‌ ಮಾನ್ಯ

ವಾಹನ ಸವಾರರಿಗೆ ಗುಡ್‌ ನ್ಯೂಸ್‌, ಅವಧಿ ಮುಗಿದರೂ 30 ದಿನ ಡಿಎಲ್‌ ಮಾನ್ಯ

ಈ ಹಿಂದೆ 2019ರ ತಿದ್ದುಪಡಿಯಲ್ಲಿ ರದ್ದುಗೊಳಿಸಲಾಗಿದ್ದ 30 ದಿನಗಳ ಕಾಲಾವಕಾಶವನ್ನು ಈಗ ಮತ್ತೆ ಜಾರಿಗೆ ತರಲಾಗಿದೆ. ಇದರಿಂದ ಡಿಎಲ್ ಅವಧಿ ಮುಗಿದ ಮೊದಲ 30 ದಿನಗಳಲ್ಲಿ ಅಪಘಾತ ಸಂಭವಿಸಿದರೂ ವಿಮೆ ಕ್ಲೇಮ್ ಮಾಡಲು ಅವಕಾಶ ಸಿಗಲಿದೆ.

LPG price hike: ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್, ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆ 195.50 ರೂ. ಏರಿಕೆ

ಗ್ರಾಹಕರಿಗೆ ಶಾಕ್, ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆ 195.50 ರೂ. ಏರಿಕೆ

ಈ ಏರಿಕೆಯ ನಂತರ ಬೆಂಗಳೂರಿನಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆ 1,958.00 ರೂ.ಗೆ ಏರಿದೆ. ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ₹2,078.50ಕ್ಕೆ ತಲುಪಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು ಪ್ರತಿ ಸಿಲಿಂಡರ್ ಬೆಲೆಯನ್ನು ₹114.5 ಹೆಚ್ಚಿಸಲಾಗಿತ್ತು.

Actor Rakshit shetty: ಕಾಪಿ ರೈಟ್‌ ಉಲ್ಲಂಘನೆ; ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್!

ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್!

'ನ್ಯಾಯ ಎಲ್ಲಿದೆ' ಚಿತ್ರದ 'ನ್ಯಾಯ ಎಲ್ಲಿದೆ...' ಹಾಡು ಮತ್ತು 'ಗಾಳಿ ಮಾತು' ಚಿತ್ರದ 'ಒಮ್ಮೆ ನಿನ್ನನ್ನು' ಹಾಡನ್ನು ʼಬ್ಯಾಚುಲರ್ ಪಾರ್ಟಿʼ ಸಿನಿಮಾದಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗಿದೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕು ಅನ್ನು ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾ‌ರ್ ದೂರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್‌, ರಕ್ಷಿತ್ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಗೆ ಭಾರಿ ದಂಡ ವಿಧಿಸಿದೆ.

Minister D Sudhakar: ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡ ಸಚಿವ ಡಿ.ಸುಧಾಕರ್‌ ಅವರನ್ನು ಬೆಂಗಳೂರಿನ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಘಾ ಘಟಕದಲ್ಲಿ ಸಚಿವ ಡಿ.ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

KUWJ Awards: ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ; ವಿಶ್ವವಾಣಿಯ ರಮೇಶ್‌ ಕುಮಾರ್‌ ನಾಯಕ್‌ ಸೇರಿ ಹಲವರಿಗೆ ಪುರಸ್ಕಾರ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರಕಟ

KUWJ Awards: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ರಾಜ್ಯದ ಸಕ್ರಿಯ ಪತ್ರಕರ್ತರ ಹಿತಾಸಕ್ತಿ ಕಾಪಾಡುವ, ಅವರ ವೃತ್ತಿಪರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುವ ಪ್ರಮುಖ ನೋಂದಾಯಿತ ಸಂಸ್ಥೆಯಾಗಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ಪತ್ರಕರ್ತರನ್ನು ಗುರುತಿಸಿ ವಿವಿಧ ಪ್ರಶಸ್ತಿಗಳನ್ನು ಸಂಘವು ನೀಡುತ್ತಾ ಬಂದಿದೆ. ಸಾಧಕರಿಗೆ ಈ ಬಾರಿ ಬೀದರ್‌ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಬೆಂಗಳೂರಿನ ಸ್ಯಾಮ್‌ಸಂಗ್ ಆರ್ & ಡಿ ಇನ್ಸ್ಟಿಟ್ಯೂಟ್ ಕ್ಯಾಂಪಸ್‌ಗೆ 6 ಕಾಲೇಜುಗಳ ಸೇರ್ಪಡೆ

ಸ್ಯಾಮ್‌ಸಂಗ್ ಆರ್ & ಡಿ ಇನ್ಸ್ಟಿಟ್ಯೂಟ್ ಕ್ಯಾಂಪಸ್‌ಗೆ 6 ಕಾಲೇಜುಗಳ ಸೇರ್ಪಡೆ

ಎಸ್‌ಆರ್‌ಐ-ಬಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ಪ್ರಮುಖ ಸಂಸ್ಥೆಗಳನ್ನು ಸೇರಿಕೊಂಡಿದೆ, ಅವುಗಳಲ್ಲಿ NITTE ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕ್ರೈಸ್ಟ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಆರ್‌ವಿ ಕಾಲೇಜ್ ಆಫ್ ಎಂಜಿನಿಯ ರಿಂಗ್, ಎಸ್‌ಆರ್‌ಎಂ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ, ಕಟ್ಟಂಕುಲತ್ತೂರ್, ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯ ರಿಂಗ್ ಮತ್ತು ದಯಾನಂದ ಸಾಗರ್ ಕಾಲೇಜ್ ಆಫ್ ಎಂಜಿನಿಯರಿಂಗ್ ಸೇರಿವೆ.

ಹಿರಿಯ ನಾಗರಿಕರಿಗಾಗಿ ಸ್ಮಾರ್ಟ್‌ ಲಿಕ್ವಿಡ್‌ ಡಿಸ್ಟ್ರಿಬ್ಯೂಷನ್‌™” ತಂತ್ರಜ್ಞಾನದ ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

ವಯೋವೃದ್ಧರಲ್ಲಿ ಸಾಮಾನ್ಯವಾಗಿದ್ದರೂ ಸಾಕಷ್ಟು ಗಮನ ಸಿಗದ ಮೂತ್ರ ನಿಯಂತ್ರಣ ಸಮಸ್ಯೆ ಗೆ ಪರಿಹಾರ ನೀಡುವತ್ತ ಈ ಉತ್ಪನ್ನ ಮಹತ್ವದ ಹೆಜ್ಜೆಯಾಗಿದೆ. ವಯಸ್ಸಿನ ಜೊತೆಗೆ ಉಂಟಾಗುವ ಆರೋಗ್ಯ ಸಮಸ್ಯೆಗಳು ಈ ಸಮಸ್ಯೆಯನ್ನು ಹೆಚ್ಚಿಸುತ್ತಿದ್ದು, ಇದರಿಂದ ಹಿರಿಯ ರಲ್ಲಿ ಹೊರಗೆ ಹೋಗುವ ಭಯವೂ ಉಂಟಾಗುತ್ತದೆ.

41.5% ಹೂಡಿಕೆಯಿಂದ IHC ಪ್ರಮೋಟರ್ ಸ್ಥಾನಕ್ಕೆ ಸಮ್ಮಾನ್ ಕ್ಯಾಪಿಟಲ್ ಲಿಮಿಟೆಡ್

IHC ಪ್ರಮೋಟರ್ ಸ್ಥಾನಕ್ಕೆ ಸಮ್ಮಾನ್ ಕ್ಯಾಪಿಟಲ್ ಲಿಮಿಟೆಡ್

ಬಲಿಷ್ಠ ಬಂಡವಾಳ, ಉತ್ತಮ ಕ್ರೆಡಿಟ್ ಪ್ರೊಫೈಲ್ ಮತ್ತು ಕಡಿಮೆ ವೆಚ್ಚದ ವಿಭಿನ್ನ ಹಣಕಾಸು ಮೂಲಗಳ ಲಭ್ಯತೆಯಿಂದ, FY 2029ರೊಳಗೆ ಭಾರತದ ಟಾಪ್-3 NBFCಗಳಲ್ಲಿ ಒಂದಾಗು ವುದು, ಜೊತೆಗೆ AUM, RoA ಮತ್ತು RoE ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿಸುವ ಗುರಿಯನ್ನು ಸಮ್ಮಾನ್ ಕ್ಯಾಪಿಟಲ್ ಹೊಂದಿದೆ.

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ; ಬೆಂಕಿ ಹೊತ್ತಿಕೊಂಡು ಸಜೀವ ದಹನ!

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಘಟನೆ ನಡೆದಿದೆ. ಸಾರಿಗೆ ಬಸ್‌ಗೆ ಯುವಕ ರಾಯಲ್ ಎನ್‌ಫೀಲ್ಡ್ ಬೈಕ್‌ ಸಮೇತ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುದ್ರಣ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ  ಸಕಾಲಿಕ ಚಿಕಿತ್ಸೆ

ತೀವ್ರ ಸುಟ್ಟಗಾಯ: ಐವರಿಗೆ ಸಕಾಲಿಕ ಚಿಕಿತ್ಸೆ

ಗಾಯಾಳುಗಳು ಸ್ಪರ್ಶ್ ಆಸ್ಪತ್ರೆಗೆ ವರ್ಗಾವಣೆಯಾಗುತ್ತಿದ್ದಂತೆ ಸಾಮೂಹಿಕ ಅಪಘಾತ ಮತ್ತು ಸುಟ್ಟ ಗಾಯಗಳ ನಿರ್ವಹಣೆಯ ತಂಡವು ತಕ್ಷಣ ಸಕ್ರಿಯಗೊಂಡು ಕಾರ್ಯ ಪ್ರವೃತ್ತವಾಯಿತು. ವಿಶೇಷವಾಗಿ ಮೀಸಲಾದ ICU ಹಾಸಿಗೆಗಳನ್ನು ಸಜ್ಜುಗೊಳಿಸಿತು ಮತ್ತು ಕೆಲವೇ ನಿಮಿಷಗಳಲ್ಲಿ ಬಹುಶಿಸ್ತೀಯ ತಜ್ಞರ ತುರ್ತು ತಂಡವನ್ನು ಒಟ್ಟುಗೂಡಿಸಿತು.

Basavaraj Bommai: ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

Basavaraj Bommai: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಸುಮಾರು 5 ಲಕ್ಷ ಕೋಟಿ ಹೊಸ ಸಾಲ ಮಾಡಿ, ದಾಖಲೆ ಸಾಲಗಾರ ಸಿದ್ದರಾಮಯ್ಯ ಎಂದು ಹೆಸರು ಪಡೆದುಕೊಂಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಕಸ ಎಸೆಯಬೇಡಿ ಎಂದಿದ್ದಕ್ಕೆ ಮುಖ್ಯ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ; ನಗದು ದೋಚಿ ದುಷ್ಕರ್ಮಿಗಳು ಪರಾರಿ

ಕಸ ಎಸೆಯಬೇಡಿ ಎಂದಿದ್ದಕ್ಕೆ ಮುಖ್ಯ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಗಳ ಗ್ಯಾಂಗ್ ಬರ್ತ್‌ಡೇ ಪಾರ್ಟಿ ಮುಗಿಸಿ, ಶಿಕ್ಷಕರ ಮನೆಯ ಬಳಿ ಕಸ ಎಸೆಯಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರ ಮಗ, ಇಲ್ಲಿ ಕಸ ಎಸೆಯಬೇಡಿ ಎಂದು ಆಕ್ಷೇಪಿಸಿದ್ದಕ್ಕೆ ಶಿಕ್ಷಕ ಹಾಗೂ ಅವರ ಮಗನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ.

Yadgir News: ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆಯ ಅಕಾಲಿಕ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಅನುಸುಜಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದ ಮನಮಿಡಿಯುವ ಘಟನೆ ಮಂಗಳವಾರ ಗುರುಮಠಕಲ್ ಪಟ್ಟಣದ ಕಟ್ಟಲ್ ಗೇರಾ ಓಣಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಅನುಸುಜಾ ತಂದೆಯ ಸಾವಿನ ದುಃಖದಲ್ಲೇ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಬರೆದು, ಮಧ್ಯಾಹ್ನದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾಳೆ.

ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ ಶೀಘ್ರ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ fly91 ವಿಮಾನಯಾನ ಶುರುವಾಗಲಿದೆ. ಇದೇ ಏಪ್ರಿಲ್ ಎರಡನೇ ವಾರದಿಂದಲೇ fly91 ವಿಮಾನ ಸೇವೆ ಆರಂಭವಾಗಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಸ್ಥೆಗೆ ಕಾರ್ಯಕ್ಕೆ ಸ್ಥಳಾವಕಾಶ ನೀಡಲಾಗಿದೆ. ಅಂತೆಯೇ fly91 ಸಂಸ್ಥೆ ಈಗಾಗಲೇ ವಿಮಾನಯಾನ ಸೇವೆಯ ಅಗತ್ಯ ಕಾರ್ಯ ಚಟುವಟಿಕೆ ಸಹ ಆರಂಭಿಸಿದೆ.

Belthangady News: ಬೆಳ್ತಂಗಡಿಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು; ಶಾಕಿಂಗ್ ವಿಡಿಯೊ ಇಲ್ಲಿದೆ!

ಚಲಿಸುತ್ತಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿನಿಯರು! video

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಘಟನೆ ನಡೆದಿದೆ. ಬಸ್‌ ಬಾಗಿಲು ಏಕಾಏಕಿ ತೆರೆದುಕೊಂಡಿದ್ದರಿಂದ ಅಕ್ಕ ಕೆಳಗೆ ಬೀಳುತ್ತಿದ್ದಾಗ, ಆಕೆಯನ್ನು ರಕ್ಷಿಸಲು ತಂಗಿ ಮುಂದಾಗಿದ್ದಾಳೆ. ಈ ವೇಳೆ ಇಬ್ಬರೂ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ವಯಸ್ಸು 40 ದಾಟಿದ್ರೂ ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮದುವೆ ಮಾಡಿಲ್ಲ ಎಂದು ತಾಯಿಯೊಂದಿಗೆ ಜಗಳವಾಡಿರುವ ಮಗ, ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಸದ್ಯ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ತಾಯಿಯ ಸ್ಥಿತಿ ಗಂಭೀರವಾಗಿದೆ.

Loading...