ಡ್ರಗ್ಸ್ ದಂಧೆ ಹೆಚ್ಚಳ; ಗೃಹ ಸಚಿವ, ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ರಾಜ್ಯದಲ್ಲಿ ನಾರ್ಕೋಟಿಕ್ಸ್ ವಿಭಾಗದ ಕಾರ್ಯವೈಖರಿ, ಇಂಟೆಲಿಜೆನ್ಸ್ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೋಲೀಸ್ ಠಾಣೆಗಳು ಮತ್ತು ಹುದ್ದೆಗಳು ಮಾರಾಟಕ್ಕೆ ಇಟ್ಟಂತೆ ಆಗಿವೆ. ಇದರಿಂದ ಯುವಕರ ಭವಿಷ್ಯ ಸಂಪೂರ್ಣವಾಗಿ ನಾಶವಾಗುತ್ತಿದೆ ಎಂದು ಶಾಸಕ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಕಿಡಿಕಾರಿದ್ದಾರೆ.