ಮಂಜೂರಾತಿ ನೀಡಿರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂ
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಅಪರ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳೊಂದಿಗೆ ವಿವಿಧ ಇಲಾಖೆಯಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ಅವರು ಶನಿವಾರ ನಡೆಸಿದರು. ಈ ವೇಳೆ ಖಾಲಿ ಹುದ್ದೆಗಳ ಭರ್ತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.