ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಮಾತ್ರ: ಅನಿತಾ ಕುಮಾರಸ್ವಾಮಿ
Anitha Kumaraswamy: ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು, ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಬರುತ್ತದೆ. ಈಗ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ನಾಟಕ ಎಂದು ಎಂ.ಬಿ.ಪಾಟೀಲ್ ಟೀಕಿಸಿದ್ದರು. ಇದಕ್ಕೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.