ಅಂಗನವಾಡಿ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ: ಹೆಬ್ಬಾಳ್ಕರ್
Laxmi Hebbalkar: ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪಾರದರ್ಶಕವಾಗಿ ಆಯ್ಕೆ ನಡೆದಿದೆ. ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.