ರಾಮಚಂದ್ರ ರಾವ್ ಸರಸದ ವಿಡಿಯೊ ಅಸಲಿ ಎಂದ ತನಿಖಾ ತಂಡ
DGP Ramachandra Rao Case: ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಅಸಲಿ ಎನ್ನುವುದು ಇದೀಗ ಸಾಬೀತಾಗಿದೆ. ನಡೆಸಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದ ಐಪಿಎಸ್ ಅಧಿಕಾರಿಗಳ ತಂಡದ 100 ಪುಟಗಳ ವರದಿಯಲ್ಲಿ ವಿಡಿಯೊದ ಸತ್ಯಾಸತ್ಯತೆ ಹೊರ ಬಿದ್ದಿದೆ.