ಕತಾರ್ ‘ಕನ್ನಡ ಪಾಠಶಾಲೆ’ ಪುನರಾರಂಭ
ವಿದೇಶದಲ್ಲಿ ನೆಲೆಸಿರುವ ಕನ್ನಡ ಭಾಷಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ವತಿಯಿಂದ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯದೊಂದಿಗೆ ಪುನರಾರಂಭಿಸಲಾಗಿದೆ. ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಇದನ್ನು ಅಧಿಕೃತವಾಗಿ ಘೋಷಿಸಲಾಯಿತು.