ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Actor Darshan: ನಟ ದರ್ಶನ್‌ರಿಂದ ಸಹಕೈದಿಗಳಿಗೆ ಕಿರುಕುಳ, ಒದೆತ: ಆರೋಪ

ನಟ ದರ್ಶನ್‌ರಿಂದ ಸಹಕೈದಿಗಳಿಗೆ ಕಿರುಕುಳ, ಒದೆತ: ಆರೋಪ

ದರ್ಶನ್ ಜೊತೆ ಒಂದೇ ಸೆಲ್​ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ (Renuka swamy murder case) ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಕೆಲ ದಿನದ ಹಿಂದೆ ದರ್ಶನ್ ಸೆಲ್‌ನಲ್ಲಿ‌ ದೊಡ್ಡ ಜಗಳ ನಡೆದು ಹೋಗಿದೆಯಂತೆ.

Namma Metro Yellow Line: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇನ್ನಷ್ಟು ರೈಲು, ಬಿಇಎಂಎಲ್‌ ಜೊತೆ ಒಪ್ಪಂದ

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇನ್ನಷ್ಟು ರೈಲು, ಬಿಇಎಂಎಲ್‌ ಜೊತೆ ಒಪ್ಪಂದ

ಹಳದಿ ಮಾರ್ಗದಲ್ಲಿ(ಆರ್‌.ವಿ.ರಸ್ತೆ- ಬೊಮ್ಮಸಂದ್ರ) ಹೆಚ್ಚಿನ ಪ್ರಯಾಣಿಕರ ಸಂಖ್ಯೆ ಪರಿಗಣಿಸಿ, ಬಿಎಂಆರ್‌ಸಿಎಲ್‌ ಹೆಚ್ಚುವರಿ ಆರು ರೈಲುಗಳಿಗಾಗಿ ಬಿಇಎಂಎಲ್‌ ಜತೆ 414 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದೆ. ಬಿಇಎಂಎಲ್‌ 2027ರ ವೇಳೆಗೆ ಹೆಚ್ಚುವರಿ ಆರು ರೈಲು (36 ಬೋಗಿ) ಪೂರೈಸುವ ಸಾಧ್ಯತೆ ಇದೆ. ಹಳದಿ ಮಾರ್ಗವನ್ನು (Namma Metro Yello Line) ಬೊಮ್ಮಸಂದ್ರದಿಂದ ಅತ್ತಿಬೆಲೆಗೆ ವಿಸ್ತರಿಸಿದ ನಂತರ ಹೆಚ್ಚುವರಿಯಾಗಿ 10-12 ರೈಲುಗಳು ಬೇಕಾಗುತ್ತವೆ.

National Herald Case‌: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಆಪ್ತನಿಗೆ ದೆಹಲಿ ಪೊಲೀಸ್‌ ನೋಟಿಸ್

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಕೆ‌ ಶಿವಕುಮಾರ್ ಆಪ್ತನಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ (DK Shivakumar) ನೋಟಿಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೊಟೀಸ್ ನೀಡಿ ತೆರಳಿದ್ದಾರೆ.

Koppala news: ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

ಪ್ರಿ ವೆಡ್ಡಿಂಗ್‌ ಫೋಟೋಶೂಟ್‌ ಮುಗಿಸಿ ಬರುತ್ತಿದ್ದ ಜೋಡಿ ಅಪಘಾತದಲ್ಲಿ ಸಾವು

Road Accident: ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯದ ಕಡೆ ತೆರಳಿ ಮರಳುತ್ತಿದ್ದರು.

Belagavi Assembly Session: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಅನ್ನದಾತರ ಸಮಸ್ಯೆಗಳೇ ಬಿಜೆಪಿ ಅಸ್ತ್ರ

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಆಡಳಿತ- ವಿಪಕ್ಷ ಸನ್ನದ್ಧ

karnataka winter session: ಮೊದಲ ದಿನವಾದ ಇವತ್ತು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆಯಲಿದೆ. ಇಂದಿನಿಂದ ಡಿಸೆಂಬರ್ 19ರವರೆಗೂ ಚಳಿಗಾಲದ ಅಧಿವೇಶನ ನಡೆಯಲಿದ್ದು ರಾಜಕೀಯ ಜಿದ್ದಾಜಿದ್ದಿ ಕಾವೇರುವುದು ಖಚಿತವಾಗಿದೆ. ಸದನ ಒಳಗೆ ಮತ್ತು ಹೊರಗೂ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೂಪುರೇಷೆ ಸಜ್ಜಾಗಿದೆ. ವಿವಿಧ ಸಂಘಟನಗಳು ಭಾರಿ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, 6 ಸಾವಿರಕ್ಕೂ ಅಧಿಕ ಪೊಲೀಸರ ಭದ್ರತೆ ಹಾಕಲಾಗಿದೆ.

Fire Accident: ಗೋವಾ ಅಗ್ನಿ ದುರಂತದಲ್ಲಿ ಬೆಂಗಳೂರು ಮೂಲದ ಯುವಕನೂ ಸಾವು

ಗೋವಾ ಅಗ್ನಿ ದುರಂತ: ಕನ್ನಡಿಗನೂ ಸಾವು

Goa Night Club Fire: ಗೋವಾದಲ್ಲಿ ನಡೆದಿರುವ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನವಾಗಿದ್ದು, ಈ ಪೈಕಿ ಕರ್ನಾಟಕದ ಓರ್ವ ವ್ಯಕ್ತಿ ಕೂಡ ಸೇರಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಹೆಗಡೆನಗರದ ನಿವಾಸಿ ಇಶಾಕ್ (25) ಮೃತ ದುರ್ದೈವಿ. ನಾಲ್ವರು ಸ್ನೇಹಿತರ ಜತೆ ಇಸಾಕ್‌ ಭಾನುವಾರ ಮಧ್ಯಾಹ್ನ ಗೋವಾ ಟ್ರಿಪ್‌ಗೆ ಹೋಗಿದ್ದರು.

TET Examination: ಬಿಗಿ ಪೊಲೀಸ್ ಭದ್ರತೆಯ ನಡುವೆ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಯಶಸ್ವಿಯಾಗಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ನಗರದ ೧೫ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ೯.೩೦ ರಿಂದ ೧೨ ಗಂಟೆವರೆಗೆ ಬೆಳಗಿನ ಪಾಳಿಯ ಪರೀಕ್ಷೆ ಯು ೬ ಕೇಂದ್ರಗಳಲ್ಲಿ ನಡೆದರೆ, ೨ ರಿಂದ ೪-೩೦ರ ತನಕ ಮದ್ಯಾಹ್ನದ ಪಾಳಿಯಲ್ಲಿ ೧೫ ಕೇಂದ್ರಗಳಲ್ಲಿ ನಡೆಯಿತು. ಎಲ್ಲಾ ಕೇಂದ್ರಗಳಲ್ಲಿ ಕೂಡ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪರೀಕ್ಷೆಗೆ ಬೇಕಾದ ಮೂಲಸೌಕರ್ಯಗಳನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಸಾಕ್ಷರತಾ ಮತ್ತು ಶಾಲಾ ಶಿಕ್ಷಣ ಇಲಾಖೆ ಒದಗಿಸಿತ್ತು.

ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ ಬಲಿಷ್ಠವಾಗಿ ಬೆಳೆಯುತ್ತಿದೆ : ರಾಜ್ಯಾಧ್ಯಕ್ಷ ಡಾ.ಕೆ.ಎಂ. ಸಂದೇಶ್

ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ ಬಲಿಷ್ಠವಾಗಿ ಬೆಳೆಯುತ್ತಿದೆ

ಬಾಬಾ ಸಾಹೇಬ ಅಂಬೇಡ್ಕರ್ ಅವರ ಆಶಯಗಳನ್ನು ಜನರೆಡೆಗೆ ಕೊಂಡೊ ಯ್ಯುವ ಮೂಲಕ ಅವರಲ್ಲಿ ಅರಿವಿನ ಹಣತೆ ಹಚ್ಚುವ ಕೆಲಸವನ್ನು ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ  ಮಾಡುತ್ತಾ ಇಂದು ಬಲಿಷ್ಠ ಸಂಘಟನೆಯಾಗಿ ಬೆಳೆಯುತ್ತಿರುವುದು ಸಂತೋಷ ತಂದಿದೆ

Mahila Utsava 2025: ಕರ್ನಾಟಕ ಮಹಿಳಾ ಯಕ್ಷಗಾನ ತಂಡದಿಂದ ಯಕ್ಷೋತ್ಸವ ಸಂಪನ್ನ

ಕರ್ನಾಟಕ ಮಹಿಳಾ ಯಕ್ಷಗಾನ ತಂಡದಿಂದ ಯಕ್ಷೋತ್ಸವ

ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆಯಿಂದ ಆರು ತಿಂಗಳ ಕಾಲ ವಿದ್ಯಾರ್ಥಿವೇತನ ಪಡೆದ ಮಹಿಳಾ ಕಲಾವಿದರಿಂದಲೇ ಬೆಂಗಳೂರಿನ ನಯನಾ ಸಭಾಂಗಣದಲ್ಲಿ ʼಶಶಿಪ್ರಭಾ ಪರಿಣಯʼ ಎಂಬ ಆಖ್ಯಾನ ಪ್ರದರ್ಶನಗೊಂಡಿತು. ತಂಡದ ಕಲಾವಿದರಿಂದ ಕೃಷ್ಣಾರ್ಜುನ ಕಾಳಗ ಎಂಬ ಪ್ರಸಂಗವನ್ನೂ ಪ್ರದರ್ಶಿಸಲಾಯಿತು.

kadalekai Parishe: ಚಿಕ್ಕಬಳ್ಳಾಪುರ ವೀರಾಂಜನೇಯ ಸನ್ನಿಧಿಯಲ್ಲಿ ಕಡಲೇಕಾಯಿ ಪರಿಷೆಗೆ ಚುಂಚಶ್ರೀ ಚಾಲನೆ

ವೀರಾಂಜನೇಯ ಸನ್ನಿಧಿಯಲ್ಲಿ ಕಡಲೇಕಾಯಿ ಪರಿಷೆಗೆ ಚುಂಚಶ್ರೀ ಚಾಲನೆ

ನಗರದ ಹೊರ ವಲಯದ ಆದಿಚುಂಚನಗಿರಿ ಶಾಖಾ ಮಠದ ಎದುರು ಸೂಲಾ ಲಪ್ಪ ದಿನ್ನೆಯಲ್ಲಿ ನೆಲೆಸಿರುವ ಶ್ರೀವೀರಾಂಜನೇಯ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಕಡಲೇ ಕಾಯಿ ಪರಿಷೆ ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

KSCA ಚುನಾವಣೆ; ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಡಿಸೆಂಬರ್‌ 7ರಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್‌ ಆಯ್ಕೆಯಾಗಿದ್ದಾರೆ. ಅವರು 191 ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಕೆ.ಎನ್.ಶಾಂತಕುಮಾರ್ ಅವರು ವಿರುದ್ಧ ಗೆಲುವು ಸಾಧಿಸಿದ್ದಾರೆ. ಅವರ ಪರ ಒಟ್ಟು 749 ಮತ ಚಲಾವಣೆಯಾಗಿದೆ.

Mandya Car Accident: ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿಯಲ್ಲಿ ಭಾನುವಾರ ಅಪಘಾತ ನಡೆದಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Pawan Kalyan Udupi Visit: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್‌ ಕಲ್ಯಾಣ್‌; ಪುತ್ತಿಗೆ ಶ್ರೀಗಳಿಂದ ʼಅಭಿನವ ಕೃಷ್ಣದೇವರಾಯʼ ಬಿರುದು ನೀಡಿ ಗೌರವ

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಪವನ್‌ ಕಲ್ಯಾಣ್‌ ಅವರು ಭಾನುವಾರ ಭೇಟಿ ನೀಡಿದ್ದರು. ಪರ್ಯಾಯ ಪುತ್ತಿಗೆ ಮಠದಿಂದ ಪವನ್ ಕಲ್ಯಾಣ್‌ಗೆ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಕನಕನ ಕಿಂಡಿಯ ಮೂಲಕ ಅವರು ಕೃಷ್ಣನ ದರ್ಶನ ಮಾಡಿದರು.

Maize Procurement: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ; ಹಾವೇರಿಯಲ್ಲಿ ರೈತರ ಸಂಭ್ರಮಾಚರಣೆ

ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ

Maize growers protest: ಹಾವೇರಿ ಸೇರಿ ವಿವಿಧೆಡೆ ಪ್ರತಿಭಟನೆ ನಡೆಸಿದ್ದ ಮೆಕ್ಕೆಜೋಳ ಬೆಳೆಗಾರರು, ಪ್ರತಿ ರೈತನಿಂದ 100 ಕ್ವಿಂಟಲ್​​​ ಮೆಕ್ಕೆಜೋಳ ಖರೀದಿಸಬೇಕು, ಪ್ರತಿ ಕ್ವಿಂಟಲ್‌ಗೆ 3000 ರೂ. ನೀಡಬೇಕು ಎಂದು ಆಗ್ರಹಿಸಿದ್ದರು. ಆದರೆ, ಇದೀಗ 50 ಕ್ವಿಂಟಲ್ ಖರೀದಿಗೆ ಸರ್ಕಾರ ಒಪ್ಪಿದೆ.

Bagepally News: ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ : ಹಿರಿಯ ವಕೀಲ ಎ.ಜಿ.ಸುಧಾಕರ್

ಮಹಿಳೆಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಲಿ

ದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣ ಹತ್ಯೆ, ಬಾಲ ವಿವಾಹ, ಮುಂತಾದ ಶೋಷಣೆಗಳು ನಡೆಯುತ್ತವೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ.

Karnataka TET 2025: ಯಾದಗಿರಿಯಲ್ಲಿ ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಮಹಿಳಾ ಅಭ್ಯರ್ಥಿಗಳ ಆಕ್ರೋಶ

ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಆಕ್ರೋಶ

ಯಾವುದೇ ಪರೀಕ್ಷೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ವಿನಾಯಿತಿ ಇದೆ. ಆದರೆ, ಯಾದಗಿರಿಯ ಕಾಲೇಜೊಂದರಲ್ಲಿ ಕಿವಿ ಓಲೆ, ಮೂಗುತಿ, ಬಳೆ ಮಾತ್ರವಲ್ಲದೆ ಕಾಲುಂಗುರಗಳನ್ನೂ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪರೀಕ್ಷಾರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ.

Chikkaballapur News: ಅಂಬೇಡ್ಕರ್ ರೀತಿ ನಿರಂತರ ಅಧ್ಯನಶೀಲರಾಗುವ ಮೂಲಕ ದೇಶದ ಆಸ್ತಿಯಾಗಬೇಕು: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಬಣ್ಣನೆ

ಅಂಬೇಡ್ಕರ್ ರೀತಿ ನಿರಂತರ ಅಧ್ಯನಶೀಲರಾಗುವ ಮೂಲಕ ದೇಶದ ಆಸ್ತಿಯಾಗಬೇಕು

ಯಾವುದೇ ವ್ಯಕ್ತಿ ಶಿಕ್ಷಣ ಪಡೆದು ಬುದ್ಧಿವಂತನಾದರೆ ಆತನಿಗೆ ಮೋಸ ಮಾಡುವ ಪ್ರಯತ್ನವನ್ನು ಇತರರು ಮಾಡಲಾರರು. ಕೇವಲ ವಿದ್ಯಾವಂತರಾಗುವುದರಿಂದ ಜೀವನದ ಅರ್ಧ ಸಮಸ್ಯೆಗಳು ಪರಿಹಾರವಾಗುತ್ತವೆ. ಶಿಕ್ಷಣ ಪಡೆದವರು ಹುಲಿ ಹಾಲನ್ನು ಕುಡಿದವರಂತೆ ಶಕ್ತಿವಂತರು ಹಾಗೂ ಯುಕ್ತಿವಂತರು ಆಗುತ್ತಾರೆ ಎನ್ನುವುದು ಅಂಬೇಡ್ಕರ್ ಮಾತಾಗಿದೆ

Chikkaballapur News: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ, ಕಟ್ಟಡ ಮಾಲೀಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಇಂಜನಿಯರ್ ರಾಜರೆಡ್ಡಿ ಮಾತ ನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಎಂ.ಜಿ.ರಸ್ತೆ ಬದಿಯಲ್ಲಿನ ಕಟ್ಟಡ ಮಾಲೀಕರಿಗೆ ಒಂದು ವರ್ಷದ ಹಿಂದೆ ನೋಟಿಸ್ ನೀಡಲಾಗಿದೆ. ಈಗಾಗಲೇ ಹಲವು ಮಂದಿ ಕಟ್ಟಡ ಮಾಲೀಕರು ಸ್ವಯಂ ಪ್ರೇರಿತವಾಗಿ ಕಟ್ಟಡಗಳನ್ನು ತೆರವುಗೊಳಿಸಿದ್ದಾರೆ.

MLA KH Puttaswamy Gowda: ಕಾರ್ಮಿಕ ಇಲಾಖೆಯಲ್ಲಿ ಅನೇಕ ಸೌಲಭ್ಯಗಳಿದ್ದು ಸರಿಯಾಗಿ ಬಳಸಿಕೊಳ್ಳಿ : ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಕಾರ್ಮಿಕ ಇಲಾಖೆಯಲ್ಲಿ ಅನೇಕ ಸೌಲಭ್ಯಗಳಿದ್ದು ಸರಿಯಾಗಿ ಬಳಸಿಕೊಳ್ಳಿ

ಅರ್ಹ ಫಲಾನುಭವಿಗಳು ಈ ಯೋಜನೆಗಳನ್ನು ಸದ್ಭಳಕೆಮಾಡಿಕೊಳ್ಳಬೇಕು, ಇದರ ಜೊತೆಗೆ ಕೆಲಸ ಮಾಡುವ ಸಂದರ್ಭದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಕಾರ್ಮಿಕರ ಸುರಕ್ಷಿತೆಗೋಸ್ಕರ ಎಲ್ಲಾ ವಿಧದ ಕಾರ್ಮಿಕರಿಗೂ ಸಹ ಸುರಕ್ಷ ಪರಿಕರಗಳನ್ನು ನೀಡಲಾಗುತ್ತಿದೆ, ಎಲ್ಲರೂ ತಪ್ಪದೆ ಸುರಕ್ಷಿತೆ ದೃಷ್ಟಿಯಿಂದ ಸುರಕ್ಷಿತ ಪರಿಕರಗಳನ್ನು ಬಳಸಿಕೊಳ್ಳಬೇಕಾಗಿದೆ

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ; ಸಿದ್ದರಾಮಯ್ಯ, ಮಹದೇವಪ್ಪಗೆ ಎಚ್‌ಡಿಕೆ ತಿರುಗೇಟು

ನನ್ನದು ಕೃಷ್ಣ ತತ್ವ, ಕಾಂಗ್ರೆಸ್‌ನದ್ದು ಕಂಸ ತತ್ವ ಎಂದ ಕುಮಾರಸ್ವಾಮಿ

Bhagavad Gita in school syllabus: ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Bagepally News: ಸಿಪಿಐಎಂ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನಾಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಇಡೀ ಜೀವನ ಸಮಾನತೆ, ಸ್ವಾತಂತ್ರ‍್ಯ ಕ್ಕಾಗಿ ಹೋರಾಡಿದ ಜೊತೆಗೆ ವಿಶ್ವದ ಉತ್ಕೃಷ್ಟ ಸಂವಿಧಾನ ರಚಿಸುವ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಮಾನತೆ ಒದಗಿಸಿ ಕೊಟ್ಟಿದ್ದಾರೆ. ಇಂತಹ ಮಹಾನ್ ನಾಯಕರು ಸದಾ ಸ್ಮರಣೀಯರು

ಶಿಕ್ಷಣದಿಂದಲೇ ಪ್ರಗತಿ ಸಾಧ್ಯವೆಂಬುದು ಅಂಬೇಡ್ಕರ್ ಬಲವಾದ ನಂಬಿಕೆ : ನರಸಿಂಹಮೂರ್ತಿ ಅಭಿಮತ

ಶಿಕ್ಷಣದಿಂದಲೇ ಪ್ರಗತಿ ಸಾಧ್ಯವೆಂಬುದು ಅಂಬೇಡ್ಕರ್ ಬಲವಾದ ನಂಬಿಕೆ

ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ನಂತರ ಮಾತನಾಡಿದ ಅವರು ಬಿ.ಆರ್. ಅಂಬೇಡ್ಕರ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿದ್ದು, ಭಾರತದಲ್ಲಿ ಆರ್ಥಿಕ ಭದ್ರತೆಗೆ ಭದ್ರ ಬುನಾದಿಯನ್ನು ಹಾಕಿದ್ದರು.

Bagepally News: ಡಾ.ಬಿ.ಆರ್.ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ ಹೇಳಿಕೆ ಡಾ.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಅಂಬೇಡ್ಕರ್‌ ಆದರ್ಶ ಮತ್ತು ತತ್ವ ಸಿದ್ಧಾಂತಗಳು ಕಾಲಕ್ಕೂ ಸ್ಪೂರ್ತಿ

ಭಾರತ ರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಭಾರತದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪ ಸಂಖ್ಯಾತ ಸೇರಿದಂತೆ ಎಲ್ಲಾ ವರ್ಗಕ್ಕೂ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಅವರ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು.

8th Smart India Hackathon: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2025ರ ೮ನೇ ಆತಿಥ್ಯಕ್ಕೆ ನಾಗಾರ್ಜುನ ಕಾಲೇಜು ಸನ್ನದ್ಧ : ಪ್ರಾಂಶುಪಾಲ ಡಾ.ತಿಪ್ಪೇಸ್ವಾಮಿ

೮ನೇ ಆತಿಥ್ಯಕ್ಕೆ ನಾಗಾರ್ಜುನ ಕಾಲೇಜು ಸನ್ನದ್ಧ

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಆತಿಥ್ಯ ವಹಿಸಲು ದೇಶದ 3600 ತಾಂತ್ರಿಕ ಕಾಲೇಜುಗಳು ಅರ್ಜಿ ಸಲ್ಲಿಸಿದ್ದು ಡಿಜಿಟಲೀರಣಗೊಂಡ ಮೂಲಭೂತ ಸೌಕರ್ಯಗಳು, ಆಧುನಿಕ ಬೆಳವಣಿಗೆ,ಆತಿಥ್ಯಕ್ಕೆ ಆಡಳಿತ ಮಂಡಳಿತ ಸಹಮತ ಇವುಗಳ ಆಧಾರದಲ್ಲಿ ಕೇಂದ್ರ ಸರಕಾರ ೬೦ ನೋಡಲ್ ಕೇಂದ್ರ ಗಳನ್ನು ಗುರುತಿಸಿದೆ.

Loading...