ಯುವತಿ ಕುತ್ತಿಗೆಗೆ ಚಾಕು ಇಟ್ಟ ಸರಗಳ್ಳನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ!
ಬೆಂಗಳೂರಿನಲ್ಲಿ ದೊಮ್ಮಲೂರಿನಲ್ಲಿ ಹಾಡಹಗಲೇ ಕಚೇರಿಯೊಂದಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಚಿನ್ನ ನೀಡುವಂತೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಚಿನ್ನ ನೀಡಲು ನಿರಾಕರಿಸಿದರೆ ಕತ್ತು ಸೀಳುವುದಾಗಿ ಯುವತಿಗೆ ಬೆದರಿಕೆ ಹಾಕಿದ ಆರೋಪಿಯನ್ನು ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.